ಶಿವಮೊಗ್ಗ : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ.
ಸ್ವಾಮಿ ವಿವೇಕಾನಂದ ಬಡಾವಣೆಯ ಶ್ವೇತಾ ಬಂಡಿ ಎಂಬುವರ ಮನೆಯಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಪ್ರತ್ಯಕ್ಷದಿಂದ ಮನೆಯವರು ಆತಂಕಗೊಂಡಿದ್ದರು. ಕಾರಿನಲ್ಲಿದ್ದ ಹೆಬ್ಬಾವು ಕಂಡು ಮನೆಯವರು ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಉರಗ ತಜ್ಞ ಕಿರಣ್ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ನಂತರ ಸೆರೆ ಹಿಡಿದ ಹೆಬ್ಬಾವನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹೆಬ್ಬಾವು ಸೆರೆಯಿಂದ ಕಾರಿನ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.
