Trending

ಭೀಕರ ಅಪಘಾತ : ಆಟೋಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಮಗು ಸೇರಿ 6 ಜನ ಸಾವು

Spread the love

ಮಂಗಳೂರು: ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ.

ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಂದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ಹಾಗೂ ಒಂದು ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಸ್ಸುಇದ್ದಕಿದ್ದಂತೆ ಹಿಂದೆ ಚಲಿಸಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್‌ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[pj-news-ticker]