ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ಗೆ ಬಿಗ್ ಶಾಕ್ ಎದುರಾಗಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆಯಲ್ಲಿ ಬರೋಬ್ಬರಿ 102.55 ಕೋಟಿ ರೂಪಾಯಿ ದಂಡ ಕಟ್ಟುವಂತೆ ನಟಿಗೆ, ಡಿಆರ್‌ಐ ನೋಟಿಸ್ ನೀಡಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿತ್ತು. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ದಂಡ ಪಾವತಿ ಮಾಡದಿದ್ದರೆ ಆಸ್ತಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ. ಎ2 ಆರೋಪಿ ತರುಣ್ ಕೊಂಡುರು ರಾಜು 67.6 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡವಾಗಿದೆ. ಈತನಿಗೆ 62 ಕೋಟಿ ರೂ. ದಂಡ ವಿಧಿಸಲಾಗಿದೆ. ಸಾಹಿಲ್ ಜೈಲ್ ಮತ್ತು ಭರತ್ ಜೈನ್ ತಲಾ 63.61 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡಪಟ್ಟಿದೆ. ಭರತ್ ಜೈನ್ ಹಾಗೂ ಸಾಹಿಲ್ ಜೈನ್ 53 ಕೋಟಿ ದಂಡ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯಲಿದೆ.
ರನ್ಯಾ ರಾವ್ ಕೇಸ್‌ಗೆ ಸಂಬಂಧಿಸಿ ಇಂದು ಹೈಕೋರ್ಟ್ನಲ್ಲಿ ಕಾಫಿಪೋಸಾ ಅರ್ಜಿ ಕೂಡ ವಿಚಾರಣೆ ಆಗಿದ್ದು, ಅರ್ಜಿ ವಿಚಾರಣೆ ಸೆ.11ಕ್ಕೆ ಮುಂದೂಡಲಾಗಿದೆ.
