Trending

ಆನಂದಪುರ : ನಾಗರಹಾವು ಕಚ್ಚಿ ವ್ಯಕ್ತಿ ಸಾವು

Spread the love

ಆನಂದಪುರ: ನಾಗರಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸೆ.2ರ ಮಂಗಳವಾರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಆಚಾಪುರ ಗ್ರಾ.ಪಂ. ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ವೀರೇಶ್ (40) ಮೃತಪಟ್ಟ ವ್ಯಕ್ತಿ.

ವೀರೇಶ್ ಮಂಗಳವಾರ ಬೆಳಗ್ಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು ಕಚ್ಚಿದ್ದು, ತಕ್ಷಣ ಈತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು, ಪರಿಶೀಲಿಸಿದ ವೈದ್ಯರು ಈತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

[pj-news-ticker]