ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.
ಎನ್ಡಿಎ ನಾಮನಿರ್ದೇಶಿತರಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಸ್ಪಷ್ಟವಾಗಿ ಗೆಲುವು ಸಾಧಿಸಿದ್ದಾರೆ.
ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 152 ಮತಗಳು.
