Trending

ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಲಾರಿ – ಸಾವಿನ ಸಂಖ್ಯೆ 8ಕ್ಕೆ ಏರಿಕೆ

Spread the love

ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಹಾಸನ – ಮೈಸೂರು ರಾಷ್ಟ್ರೀಯ ಹೆದ್ದಾರಿ 373 ಗೆ ಹೊಂದಿಕೊಂಡಂತಿರುವ ಮೊಸಳೆ ಹೊಸಹಳ್ಳಿಯಲ್ಲಿ ಚತುಷ್ಪಥ ರಸ್ತೆಯ ಒಂದು ಪಥದಲ್ಲಿ ಮೆರವಣಿಗೆ ಹಾದು ಹೋಗುತ್ತಿತ್ತು. ಹಾಸನದಿಂದ ಮೈಸೂರು ಕಡೆಗೆ ಮತ್ತೊಂದು ಪಥದಲ್ಲಿ ಹೋಗುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದೆ.

[pj-news-ticker]