Trending

ಝೀರೋ ಟ್ರಾಫಿಕ್ ನಲ್ಲಿ ತೀರ್ಥಹಳ್ಳಿಯ ಯುವಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

Spread the love

ಶಿವಮೊಗ್ಗ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಯುವಕನನ್ನು ಝೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್ ಮಾಡಲಾದ ಘಟನೆ ಸೆ.17ರ ಬುಧವಾರ ನಡೆಯಿತು.

ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರಹಳ್ಳಿ ಗ್ರಾಮದ ಶ್ರೇಯಾಂಕ ಎಂಬ ಯುವಕ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹಿನ್ನೆಲೆ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.

ಶ್ರೇಯಾಂಕನಿಗೆ ನಿನ್ನೆ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಬಹು ಅಂಗಾಂಗ ವೈಫಲ್ಯ ಆಗಿರುವುದು ಕಂಡುಬಂದಿದೆ.

ಈ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಪೊಲೀಸರ ಸಹಕಾರದೊಂದಿಗೆ ಯುವಕನನ್ನು ಝೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.

[pj-news-ticker]