Trending

ಶಿರಸಿಯಲ್ಲಿ ಘೋರ ಅವಘಡ : ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದೆ. ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಯುವತಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.

ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೋಷಕರು ಕೆಲಸಕ್ಕೆ ತೆರಳಿದ್ದ ವೇಳೆ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಅನಾರೋಗ್ಯದಿಂದ ಮನೆಯಲ್ಲೇ ಉಳಿದಿದ್ದ ರಂಜಿತಾ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

[pj-news-ticker]