ಭದ್ರಾವತಿ : ಇಲ್ಲಿನ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಮಿಲಿಟರಿ ಕ್ಯಾಂಪಿನ 97-RAF ಬೆಟಾಲಿಯನ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ, ಅಂಧರ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಿದ್ದರು
ಈ ಕಾರ್ಯಕ್ರಮದಲ್ಲಿ ಆರ್ ಏ ಎಫ್ ನ ಕಮಾಂಡೆಂಟ್ ಕಮಲೇಶ್ ಕುಮಾರ್, ಡೆಪ್ಯೂಟಿ ಕಮಾಂಡೆಂಟ್ ಆಗಿರುವ ಸುನೀಲ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ದೀಪಕ್ ಕುಮಾರ್ ಸೇರಿದಂತೆ ಆರ್ ಏ ಎಫ್ ನ ಪೊಲೀಸ್ ಸಿಬ್ಬಂದಿ ಸದಸ್ಯರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಹಾಗೂ ಅಂಧರ ಕೇಂದ್ರದ ವಿದ್ಯಾರ್ಥಿಗಳು ಹಾಜರಿದ್ದರು.
