ಸಾಗರ: ಬೆಂಗಳೂರಿನಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ ವಾಹನ ಪಲ್ಟಿಯಾಗಿ 14 ಜನರು ಗಾಯಗೊಂಡ ಘಟನೆ ಸೆ.28ರ ರವಿವಾರ ತಾಲೂಕಿನ ಆವಿನಹಳ್ಳಿ ಸಮೀಪದ ಕೂರನಕೊಪ್ಪ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ 14 ಜನರು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಆವಿನಹಳ್ಳಿ ಬಳಿ ಎಮ್ಮೆಯೊಂದು ಅಡ್ಡ ಬಂದಿದ್ದು, ಚಾಲಕ ಇದನ್ನು ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾಗಿದ್ದು,12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು
ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಿಳಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲು ಸಹಕಾರ ನೀಡಿದರು.
