ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ʼಇಂದಿರಾ ಆಹಾರ ಕಿಟ್ʼ ವಿತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸದ್ಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ನುಮುಂದೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಇತರ ಆಹಾರ ಸಾಮಗ್ರಿ ನೀಡಲಾಗುತ್ತದೆ.
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಎಚ್ಎಚ್ ಪಡಿತರ ಫಲಾನುಭವಿಗಳಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ಗಳನ್ನು (ಪೌಷ್ಟಿಕ ಆಹಾರ ಕಿಟ್- ತೊಗರಿ ಬೇಳೆ 2 ಕೆಜಿ, ಅಡುಗೆ ಎಣ್ಣೆ 1 ಕೆಜಿ, ಸಕ್ಕರೆ 1 ಕೆಜಿ, ಉಪ್ಪು 1 ಕೆಜಿ.) ರೂ.61.19 ಕೋಟಿಗಳ ಮೊತ್ತದಲ್ಲಿ ವಿತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.
ಈ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಇಂದಿರಾ ಆಹಾರ ಕಿಟ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್ ಅನ್ನು ಒದಗಿಸಲು ಬಜೆಟ್ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
