Trending

ಮೀನುಗಾರನೇ ಮೀನಿಗೆ ಬೇಟೆಯಾದ : ಮೀನು ಚುಚ್ಚಿದ ಏಟಿಗೆ ಯುವಕನ ಪ್ರಾಣ ಹೊಯ್ತು

Spread the love

ಕಾರವಾರ:  ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದ ಮೀನುಗಾರನೇ ಮೀನಿಗೆ ಬೇಟೆಯಾಗಿದ್ದಾನೆ. ಕಾರವಾರದ ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್ ಮಾಜಾಳಿಕರ್‌ ಮೀನಿನಿಂದಲೇ ಬಲಿ ಆಗಿರುವ ನತದೃಷ್ಟ ಯುವಕ. ಅರಬ್ಬಿ ಸಮುದ್ರದಲ್ಲಿ ಮತ್ಸ್ಯ ಬೇಟೆಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನು ಮೀನಿನ ದಾಳಿಗೆ ಒಳಗಾದ ಬಳಿಕ ಆಸ್ಪತ್ರೆಗೆ ಬಂದಿದ್ದ ಅಕ್ಷಯ್ ಗೆ ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮತ್ಸ್ಯ ಶಿಕಾರಿಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಕಾಂಡೆ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡ್ಲೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

2ದಿನ ಚಿಕಿತ್ಸೆ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದ್ರೆ, ನೋವು ಮರುಕಳಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ. ದುರದೃಷ್ಟವಶಾತ್ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೆ ಹೈಟೆಕ್‌ ಆಸ್ಪತ್ರೆ ಬೇಕು ಎನ್ನುವುದು ದಶಕದಿಂದಲೂ ಹೋರಾಟ ನಡೆಯುತ್ತಿದೆ. ಇದರ ನಡುವೆ ಮೀನುಗಾರ ಸೂಕ್ತ ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದು ನಿಜಕ್ಕೂ ದುರಂತ.

[pj-news-ticker]