Trending

ಮತ್ತೆ ಚಿನ್ನಯ್ಯನ ವಿಚಾರಣೆ ಆರಂಭ : ಶಿವಮೊಗ್ಗಕ್ಕೆ ಆಗಮಿಸಿದ ಎಸ್‌ಐಟಿ

Spread the love

ಶಿವಮೊಗ್ಗ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತಾನು ಇನ್ನೂ ಹತ್ತು ಶವಗಳನ್ನು ಹೂತಿಟ್ಟಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಚಿನ್ನಯ್ಯ ಸದ್ಯ ಶಿವಮೊಗ್ಗದ ಸೊಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಹೀಗಾಗಿ ಎಸ್ಐಟಿ ಅಧಿಕಾರಿಗಳ ತಂಡವು ಶುಕ್ರವಾರ  ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಎಸ್ಪಿ ಸೈಮನ್ ಅವರ ನೇತೃತ್ವದ ತಂಡ ಬೆಳ್ತಂಗಡಿ ಕೋರ್ಟ್‌ನಿಂದ ಅನುಮತಿ ಪಡೆದಿದ್ದು ಚಿನ್ನಯ್ಯನನ್ನು ವಿಚಾರಣೆ ಮಾಡುತ್ತಿದೆ. ಎರಡು ದಿನಗಳ ಕಾಲ ವಿಚಾರಣೆ ನಡೆಸುವ ಸಾಧ್ಯತೆಯಿದೆ.

[pj-news-ticker]