ಹೋಬಾರ್ಟ್‌ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ಗಳಿಂದ ಗೆದ್ದುಕೊಂಡು ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.
ವಾಸ್ತವವಾಗಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಆ ಬಳಿಕ ಮೆಲ್ಬೋರ್ನ್ನಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು. ಇದೀಗ ಇಂದು ನಡೆದ ಮೂರನೇ ಟಿ20 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸೂರ್ಯಕುಮಾರ್ ಪಡೆ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 186 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು 9 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ಗಳನ್ನು ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.
