Trending

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಾಸವಿದ್ದ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ (ನ.05) ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ದೊಡ್ಡೇರಿ ಗಂಗೂರು ಗ್ರಾಮದ ವನಿಷಾ.ಟಿ.ಸಿ. (21) ಮೃತ ದುರ್ದೈವಿ.

ವನಿಷಾ ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಲೇಡಿಸ್‌ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಮೂಲಗಳ ಪ್ರಕಾರ, ಆಕೆ ಬೆಳಗ್ಗೆ ತಿಂಡಿ ತಿಂದು, ಸುಮಾರು 10:15 ರ ಸುಮಾರಿಗೆ ಹಾಸ್ಟೆಲ್‌ನ ಟೆರೇಸ್‌ಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿನಿಯವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

[pj-news-ticker]