ಲಕ್ನೋ: ವ್ಯಕ್ತಿಯೊಬ್ಬ ಆರು ಮಕ್ಕಳನ್ನು ಒಂದೇ ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿರುವ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ಈ ಘಟನೆಯ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ವೈರಲ್ ಆಗಿರುವ ಪೋಸ್ಟ್ನಲ್ಲಿ ವ್ಯಕ್ತಿ 4 ಮಕ್ಕಳನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡಿದ್ದಾನೆ. ಜೊತೆಗೆ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡಿದ್ದಾನೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ಆತನನ್ನು ತಡೆದು ನಿಲ್ಲಿಸಿ ಎರಡೂ ಕೈ ಮುಗಿದು ಚಾಲನೆಯ ಗಂಭೀರತೆಯನ್ನು ಬೈಕ್ ಸವಾರನಿಗೆ ಅರ್ಥಮಾಡಿಸಿದ್ದಾರೆ.
ಸಂಚಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದಕ್ಕಾಗಿ ವ್ಯಕ್ತಿಗೆ ಸಂಚಾರಿ ಪೊಲೀಸರು 7 ಸಾವಿರ ರೂ.ದಂಡವನ್ನು ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.
