Trending

ತೀರ್ಥಹಳ್ಳಿ: ಮಾನಸಿಕ ಖಿನ್ನತೆ… ಐದು ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆಗೆ ಶರಣಾದ ತಾಯಿ

Spread the love

ತೀರ್ಥಹಳ್ಳಿ: ಐದು ತಿಂಗಳ ಹಸುಗೂಸು ಬಿಟ್ಟು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಡುಮಲ್ಲಿಗೆ ಸಮೀಪದ ಅಕ್ಸಲ್ ಕೊಪ್ಪದಲ್ಲಿ ನಡೆದಿದೆ.

ಮೃತ ಮಹಿಳೆ ರಮ್ಯಾ (28) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ರಮ್ಯಾ ವಿಷ ಸೇವಿಸಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ತುಂಬಾ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತಿದ್ದ ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[pj-news-ticker]