ಪ್ರದೋಶ್ ಮಾಫಿ ಸಾಕ್ಷಿ (ಅಪ್ರೂವರ್) ಆಗಿ ಪರಿವರ್ತನೆಗೊಳ್ಳುವ ಮೂಲಕ ರೇಣುಕಾ ಸ್ವಾಮಿ ಪ್ರಕರಣಕ್ಕೆ ಅತ್ಯಂತ ಮಹತ್ವದ ತಿರುವು ದೊರೆತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರಂಭದಿಂದ ಅಂತ್ಯದ ವರೆಗೆ ಎಲ್ಲದಕ್ಕೂ ಐ ವಿಟ್ನೆಸ್ (ನೇರ […]
Archives
ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ನಟ ದರ್ಶನ್ ಅವರಿಗೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಲು 59ನೇ ಸಿಸಿಹೆಚ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು […]
ನಿಜವಾದ ಕಾಂಗ್ರೆಸಿಗರಿಗೆ ಬೆಲೆಯೇ ಇಲ್ಲ : ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಬೇಸರ
ಶಿವಮೊಗ್ಗ : ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇಳಿಮುಖವಾಗುತ್ತಿದ್ದು, ಪಕ್ಷದಲ್ಲಿ ಶುದ್ಧೀಕರಣದ ಅಗತ್ಯವಿದೆ ಎಂದು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಎಚ್.ಎಸ್.ಸುಂದರೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]
ಶಿವಮೊಗ್ಗ ಜಿಪಂ ಸಿಇಓ ಬದಲಾವಣೆ : ರಿಷಿ ಆನಂದ್‌ಗೆ ನೂತನ ಹೊಣೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ರಿಷಿ ಆನಂದ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, […]
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಭೀಕರ ಹತ್ಯೆ : 9 ತುಂಡುಗಳಾಗಿ ಮೃತದೇಹ ಪತ್ತೆ
ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರನ್ನು ಯುಎಇಯ ಶಾರ್ಜಾದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಎರಡು ತಿಂಗಳ ಬಳಿಕ ಅವರ ಮೃತದೇಹ 9 ತುಂಡುಗಳಾಗಿ ಕತ್ತರಿಸಿದ ಸ್ಥಿತಿಯಲ್ಲಿ […]
ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಆಯುರ್ವೇದ ಅಳವಡಿಸಿಕೊಳ್ಳಿ: ರಾಘವೇಂದ್ರ
ಶಿವಮೊಗ್ಗ : ಆಯುರ್ವೇದವು ಭಾರತದ ಪ್ರಾಚೀನ ಹಾಗೂ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದ್ದು, ಮಾನವನು ದೀರ್ಘಕಾಲ ಸಮತೋಲನದಿಂದ ಬದುಕಲು ಸಹಕಾರಿಯಾಗಿದೆ. ಇಂದಿನ ಒತ್ತಡದ ಜೀವನಶೈಲಿಗೆ ಆಯುರ್ವೇದ ಉತ್ತಮ ಮಾರ್ಗವಾಗಿದ್ದು, ಎಲ್ಲರೂ ಆಯುರ್ವೇದ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು […]
ಸೆ.25ರಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ
ಶಿವಮೊಗ್ಗ: ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಹಿಂದೂ ಮಹಾಸಭಾ ಗಣೇಶೋತ್ಸವaದ ಅಂಗವಾಗಿ ಸೆಪ್ಟೆಂಬರ್ 25ರಂದು ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಹಾಗೂ ಸಾರ್ವಜನಿಕರ […]
ಭದ್ರಾವತಿಯಲ್ಲಿ ಕಳೆಗಟ್ಟಿದ ಗಣೇಶ ವಿಸರ್ಜನಾ ಉತ್ಸವ ವಾದ್ಯ–ವೈಭವದೊಂದಿಗೆ ಗಣೇಶ ಮೂರ್ತಿ ವಿಸರ್ಜನೆ
ಭದ್ರಾವತಿ: ನಗರದ ಹೊಸಮನೆ ಹಿಂದೂ ಮಹಾಸಭಾ–ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ 54ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ವಿಸರ್ಜನಾ ಪೂರ್ವ ರಾಜಬೀದಿ […]
ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 49 ವರ್ಷದ ವ್ಯಕ್ತಿಗೆ 5 ವರ್ಷ ಕಾರಾಗೃಹ ಶಿಕ್ಷೆ
ಶಿವಮೊಗ್ಗ: 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 49 ವರ್ಷದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದೆ. […]
ನಾಳೆಯಿಂದ ರಾಜ್ಯಾದ್ಯಂತ ‘108’ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಯಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ‘108’ ಆರೋಗ್ಯ ಕವಚ ಆಂಬ್ಯುಲೆನ್ಸ್ ಸಿಬ್ಬಂದಿ, ನಾಳೆ (ಸೆ.22) ರಾತ್ರಿ 8 ಗಂಟೆಯ ನಂತರ ರಾಜ್ಯಾದ್ಯಂತ […]
