Trending

‘ಬೂಟ್‌ ನೆಕ್ಕುವವರಿಗೆ ಮಾತ್ರ ನಿಮ್ಮಲ್ಲಿ ಅವಕಾಶವೇ? ನನ್ನ ರಾಜಕೀಯ ತ್ಯಾಗಕ್ಕೆ ಬೆಲೆಯಿಲ್ಲವೇ : ಬೆನ್ನುಮೂಳೆ ಇಲ್ಲದ ವ್ಯಕ್ತಿಯನ್ನು ಛೂ ಬಿಟ್ಟಿದ್ದೀರಾ’

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಬೂಟ್‌ ನೆಕ್ಕುವ ಸಂಸ್ಕೃತಿ ನಿಮ್ಮ ಪಕ್ಷದಲ್ಲಿ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಮುಖಂಡ ರುದ್ರೇಶ್‌ ಮಾಡಿರುವ ಟೀಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ […]

ವಾಹನ ಸವಾರರಿಗೆ ಗುಡ್‌ ನ್ಯೂಸ್‌, ಅವಧಿ ಮುಗಿದರೂ 30 ದಿನ ಡಿಎಲ್‌ ಮಾನ್ಯ

ಬೆಂಗಳೂರು : ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ಪ್ರಮುಖ ತಿದ್ದುಪಡಿ ತಂದಿದ್ದು, ಚಾಲನಾ ಪರವಾನಗಿ (Driving License – DL) ಅವಧಿ ಮುಗಿದ ನಂತರವೂ ಮುಂದಿನ 30 ದಿನಗಳವರೆಗೆ ಅದರ ಮಾನ್ಯತೆ ಮುಂದುವರಿಯಲಿದೆ. […]

ಬಿಸಿಲ ತಾಪ : 9 ಜಿಲ್ಲೆಗಳ ಕಚೇರಿ ಸಮಯ ಬದಲಾವಣೆ, ಮಧ್ಯಾಹ್ನ 1.30ವರೆಗೂ ಮಾತ್ರ ಕೆಲಸ

ಬೆಂಗಳೂರು : ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. […]

ಏ.1ರಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಜಯಂತಿ, ರಾಷ್ಟ್ರಪತಿ ಮುರ್ಮು ಆಗಮನ

ತುಮಕೂರು, ಮಾ.30: ಏಪ್ರಿಲ್ 1ರಂದು ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಮಠದ  ಶಿವೈಕ್ಯ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 119ನೇ ಜನ್ಮದಿನೋತ್ಸವ ಅದ್ದೂರಿಯಾಗಿ ನಡೆಯಲಿದೆ. ಈ ಅಭೂತಪೂರ್ವ ಕ್ಷಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಕ್ಷಿಯಾಗಲಿದ್ದಾರೆ. ಇನ್ನೊಂದು […]

ಹೊಳೆಹೊನ್ನೂರು: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಖಾಸಗಿ ಕಾಲೇಜು ಉಪನ್ಯಾಸಕನ ಮೃತದೇಹ ಪತ್ತೆ

ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರವಿವಾರ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತರನ್ನು ಉಪನ್ಯಾಸಕ ಸುರೇಶ್‌ (58) ಎಂದು ಗುರುತಿಸಲಾಗಿದೆ. ತೋಟದಲ್ಲಿ ಸುರೇಶ್ […]

ನಕಲಿ ವೈದ್ಯರು ನೀಡಿದ ಚುಚ್ಚುಮದ್ದಿನಿಂದ ವಿದ್ಯಾರ್ಥಿನಿ ಸಾವು ಆರೋಪ : ಪ್ರಕರಣ ದಾಖಲು

ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನೊಬ್ಬ ನೀಡಿದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ಬಾಲಕಿಯನ್ನು ಸಿಂಧು (15), ಗ್ರಾಮದ ಹುಲಿಗೆಪ್ಪ […]

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಶಾರೀಕ್ ತಪ್ಪೊಪ್ಪಿಗೆ

ಬೆಂಗಳೂರು : ಮಂಗಳೂರಿನ ಹೊರವಲಯದಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್, ತಾನು ಕೃತ್ಯ ಎಸಗಿರುವುದಾಗಿ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ […]

‘ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ’: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಮೈಸೂರು: ಮುಂದಿನ ತಿಂಗಳು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ […]

ದಾವಣಗೆರೆ ಕಾಂಗ್ರೆಸ್ ಬಂಡಾಯಕ್ಕೆ ಬಿಗ್ ಟ್ವಿಸ್ಟ್ : ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾದಿಕ್ ಪೈಲ್ವಾನ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಂಡಾಯಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಮಪತ್ರ ಹಿಂಪಡೆಯದೇ ಕಣದಲ್ಲಿ ಉಳಿದಿದ್ದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ […]

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ : ಮಾರ್ಚ್‌ 30ರ ಬದಲು ಹೊಸ ದಿನಾಂಕ ನಿಗದಿ

ಬೆಂಗಳೂರು : ಕರ್ನಾಟಕದಾದ್ಯಂತ ಮಾರ್ಚ್​ 18ರಂದು ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದೆ. ಈಗಾಗಲೇ 3 ಪರೀಕ್ಷೆ ಯಶಸ್ವಿಯಾಗಿ ನಡೆದಿವೆ. ಇದೀಗ ಮಾರ್ಚ್‌ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ […]

[pj-news-ticker]