Trending

ಅ.2ಕ್ಕೆ ಹೆಚ್.ಎಂ. ಚಂದ್ರಶೇಖರಪ್ಪ ಶಿವಗಣಾರಾಧನೆ : ಹೆಚ್.ಸಿ. ಯೋಗೀಶ್

ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.2ರಂದು ಬೆಳಿಗ್ಗೆ 10.30ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]

ಪುಸ್ತಕ ಓದುವ ಅಭ್ಯಾಸದಿಂದ ಸ್ವಾವಲಂಬನೆ ಸಾಧ್ಯ : ಪ್ರೊ. ಕೇಶವಶರ್ಮ

ಶಿವಮೊಗ್ಗ : ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸವನ್ನು ರೂಢಿಸಿಕೊಂಡರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಸಂಪಾದಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದು ಹಿರಿಯ ವಿಮರ್ಶಕ ಪ್ರೊ. ಕೇಶವಶರ್ಮ ಹೇಳಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ […]

ಜನರ ಮತವನ್ನೇ ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ : SIR ವಿರುದ್ಧ ಮಂಜುನಾಥ್ ಭಂಡಾರಿ ಕಿಡಿ

ಶಿವಮೊಗ್ಗ : ಇದುವರೆಗೆ ರಾಜಕೀಯ ಲಾಭಕ್ಕಾಗಿ ಅನ್ಯಪಕ್ಷಗಳ ಶಾಸಕರು ಹಾಗೂ ಸಚಿವರನ್ನು ಸೆಳೆಯುತ್ತಿದ್ದ ಬಿಜೆಪಿ, ಇದೀಗ ಜನರ ಮತವನ್ನೇ ಕಳ್ಳತನ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ […]

ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು : ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್: ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು ಮತ್ತು ಬಿಜೆಪಿ ಶ್ರೀಮಂತರ ಪಕ್ಷ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ಉತ್ತರ ಭಾರತದಲ್ಲಿ ಶ್ರೀರಾಮನನ್ನು ಪೂಜಿಸಲಾಗುತ್ತದೆ ಮತ್ತು ದಕ್ಷಿಣದಲ್ಲಿ ಶಿವನನ್ನು ಪೂಜಿಸಲಾಗುತ್ತದೆ.ಆದರೆ, […]

ಪವಿತ್ರಾ ಗೌಡ ಭುಜದ ಮೇಲೆ ಕೈ ಹಾಕಿ “ಇವಳು ನನ್ನ ಹೆಂಡ್ತಿ” ಎಂದಿದ್ದರಂತೆ ದರ್ಶನ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಅಂದು ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಿದ್ದು […]

ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ದಾಖಲೆ : ಟ್ರ್ಯಾಪ್ ಶೂಟಿಂಗ್‌ನಲ್ಲಿ ಚಿನ್ನ ಗೆದ್ದ ನೀರೂ ಧಾಂಡಾ

ನಗೋಯಾ : ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತದ ನೀರೂ ಧಂಡಾ ಇತಿಹಾಸ ನಿರ್ಮಿಸಿದರು. ಕ್ರೀಡಾಕೂಟದ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ವೈಯಕ್ತಿಕ ಪದಕ ಗೆದ್ದ ಮೊದಲ […]

ರೇಣುಕಾಸ್ವಾಮಿ ಮೇಲೆ ದರ್ಶನ್ ಅಟ್ಟಹಾಸದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರದೋಶ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ […]

ರಾಣಿ ಚನ್ನಮ್ಮ ವಿವಿ ನೌಕರರ 32 ಲಕ್ಷ ರೂ. ಪಿಎಫ್ – ಎನ್‌ಪಿಎಸ್ ಹಣ ದುರ್ಬಳಕೆ ಆರೋಪ : ಸಹಾಯಕ ಕುಲಸಚಿವ ಸೇರಿ ಮೂವರ ಬಂಧನ

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಿ ಚೆನ್ನಮ್ಮ […]

ಶಿಕಾರಿಪುರದಲ್ಲಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ

ಶಿಕಾರಿಪುರ : ಪಿಎಫ್, ಇಎಸ್‌ಐ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಪಿಎಫ್ ಹಣವನ್ನು ಕಾರ್ಮಿಕರಿಗೆ ಸೂಕ್ತ ಅವಧಿಯಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ ಸಾಯಿ ಗಾರ್ಮೆಂಟ್ಸ್‌ನ ಸಾವಿರಾರು ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ […]

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ಸೋಮವಾರ […]

[pj-news-ticker]